Sunday, June 4, 2023

Latest Posts

BREAKING| ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಾಕಿಸ್ತಾನದ ಮಾಜಿ ಪ್ರಧಾನಿ ಮತ್ತು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಬಂಧಿಸಲಾಗಿದೆ. ದೇಶದ ರಾಜಧಾನಿ ಇಸ್ಲಾಮಾಬಾದ್‌ನ ನ್ಯಾಯಾಲಯದ ಹೊರಗೆ ಅವರನ್ನು ಬಂಧಿಸಲಾಯಿತು.

ಇಮ್ರಾನ್ ಖಾನ್ ವಿರುದ್ಧ ಹತ್ತಾರು ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ತೋಷಖಾನಾ ಪ್ರಕರಣ ಹಾಗೂ ಭಯೋತ್ಪಾದನಾ ಕೃತ್ಯಗಳಿಗೆ ಸಂಬಂಧಿಸಿದ ಪ್ರಕರಣಗಳು ಸೇರಿವೆ.

ಭ್ರಷ್ಟಾಚಾರ ಆರೋಪದ ಮೇಲೆ ಪಾಕ್ ಸೇನೆ ಆತನನ್ನು ಬಂಧಿಸಿದೆ. ಇದಕ್ಕೂ ಮುನ್ನ ಲಾಹೋರ್‌ನಲ್ಲಿರುವ ಅವರ ನಿವಾಸದಲ್ಲಿ ಅವರನ್ನು ಬಂಧಿಸಲು ಪೊಲೀಸರು ವಿಫಲ ಯತ್ನ ನಡೆಸಿದ್ದರು. ಈ ವೇಳೆ ಅವರ ಬೆಂಬಲಿಗರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ ನಡೆಯಿತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!