ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ 8 ದಿನಗಳ ಕಾಲ NAB ಕಸ್ಟಡಿಗೆ: ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan)ಅವರನ್ನು ಎಂಟು ದಿನಗಳ ಕಾಲ ಬಂಧನದಲ್ಲಿಡಲು ನ್ಯಾಯಾಧೀಶರು ಬುಧವಾರ ತೀರ್ಪು ನೀಡಿದ್ದಾರೆ.

ಇಸ್ಲಾಮಾಬಾದ್‌ನಲ್ಲಿ ಖಾನ್ ಅವರನ್ನು ಬಂಧಿಸಿದ ಒಂದು ದಿನದ ನಂತರ ಈ ತೀರ್ಪು ಬಂದಿದೆ. ಅವರನ್ನು ದೇಶದ ಉನ್ನತ ಭ್ರಷ್ಟಾಚಾರ ನಿಗ್ರಹ ಸಂಸ್ಥೆಯ ವಶಕ್ಕೆ ಎಂಟು ದಿನಗಳ ಕಾಲ ಕಳುಹಿಸಿ ಆದೇಶ ನೀಡಿದೆ.

ಇತ್ತ ಖಾನ್ ಬಂಧನಕ್ಕ ಬೆಂಬಲಿಗರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆಯುತ್ತಿದ್ದು, ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಬುಧವಾರ ವಾಯುವ್ಯದಲ್ಲಿ ರೇಡಿಯೋ ಪಾಕಿಸ್ತಾನದ ಕಟ್ಟಡಕ್ಕೆ ಬೆಂಕಿ ಹಚ್ಚಿದರು.

ದೇಶದ ಅತ್ಯಂತ ಜನನಿಬಿಡ ಪ್ರಾಂತ್ಯವಾದ ಪಾಕಿಸ್ತಾನದ ಪಂಜಾಬ್‌ನಲ್ಲಿ ಸುಮಾರು 1,000 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಪೊಲೀಸ್ ತಂಡಗಳು ಪ್ರಾಂತ್ಯದಾದ್ಯಂತ 945 ಕಾನೂನು ಉಲ್ಲಂಘಿಸುವವರು ಮತ್ತು ದುಷ್ಕರ್ಮಿಗಳನ್ನು ಬಂಧಿಸಿವೆ ಎಂದು ಅಧಿಕಾರಿಗಳು ಮಾಧ್ಯಮಗಳಿಗೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!