ಬಂಧನದ ಮುನ್ನವೇ ಪಾಕ್ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಗೆ ಸಿಕ್ಕಿತು ಜಾಮೀನು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಯೋತ್ಪಾದಕ ಕೃತ್ಯ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರಿಗೆ ಇಸ್ಲಾಮಾಬಾದ್‌ ಹೈಕೋರ್ಟ್‌ ಗುರುವಾರದವರೆಗೆ ರಕ್ಷಣಾತ್ಮಕ ಜಾಮೀನು ನೀಡಿದೆ.

ಶನಿವಾರ ನಡೆದ ರ‍್ಯಾಲಿಯಲ್ಲಿ ಪೊಲೀಸ್, ನ್ಯಾಯಾಂಗ ಮತ್ತು ಇತರ ಸಂಸ್ಥೆಗಳಿಗೆ ಬೆದರಿಕೆ ಒಡ್ಡಿದ ಆರೋಪ ಸಂಬಂಧ ಇಮ್ರಾನ್‌ ಖಾನ್‌ ವಿರುದ್ಧ ಭಯೋತ್ಪಾದನೆ ವಿರೋಧಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.ಈ ಬೆನ್ನಲ್ಲೇ ಇಮ್ರಾನ್‌ ಖಾನ್‌ ತಮ್ಮನ್ನು ಬಂಧಿಸದಂತೆ ಜಾಮೀನು ಕೋರಿ ಕೋರ್ಟ್‌ ಮೆಟ್ಟಿಲೇರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!