ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಧಿಕೃತ ರಹಸ್ಯ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನ ವಿಸ್ತರಿಸಿ ವಿಶೇಷ ನ್ಯಾಯಾಲಯವು ಮಂಗಳವಾರ ಆದೇಶಿಸಿದೆ.
ರಹಸ್ಯ ರಾಜತಾಂತ್ರಿಕ ಕೇಬಲ್ (ಸೈಫರ್) ಅನ್ನು ಬಹಿರಂಗಪಡಿಸುವ ಮೂಲಕ ಅಧಿಕೃತ ರಹಸ್ಯ ಕಾಯಿದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಳೆದ ತಿಂಗಳು ಅವರನ್ನು ಬಂಧಿಸಲಾಗಿತ್ತು.