ಮತ್ತೊಮ್ಮೆ ಪ್ರಧಾನಿ ಮೋದಿಯನ್ನು ಹೊಗಳಿದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳಿದ್ದಾರೆ.

ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರನ್ನು ಟೀಕಿಸಿರುವ ಇಮ್ರಾನ್ ಖಾನ್, ವಿಶ್ವದ ಯಾವುದೇ ರಾಜಕಾರಣಿ ಅಥವಾ ನಾಯಕ ನವಾಜ್ ಷರೀಫ್ ರೀತಿ ವಿದೇಶಗಳಲ್ಲಿ ಶತಕೋಟಿ ಮೌಲ್ಯದ ಆಸ್ತಿಯನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಇಮ್ರಾನ್ ಖಾನ್, ನವಾಜ್ ಷರೀಫ್ ಒಬ್ಬ ಭ್ರಷ್ಟ, ವಿದೇಶದಲ್ಲಿ ಅಪಾರ ಪ್ರಮಾಣದ ಆಸ್ತಿಯನ್ನ ಸಂಗ್ರಹಿಸಿದ್ದಾರೆ. ನವಾಜ್ ಷರೀಫ್ ಅವರಷ್ಟು ಆಸ್ತಿ ವಿಶ್ವದ ಯಾವ ನಾಯಕರಿಗೂ ಇಲ್ಲ . ನವಾಜ್ ಷರೀಫ್ ಅವರಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶದಲ್ಲಿ ಆಸ್ತಿ ಸಂಗ್ರಹಿಸಿಲ್ಲ ಎಂದರು.

ನವಾಜ್ ಷರೀಫ್ ಬಳಿ ಇರುವಷ್ಟು ಕೋಟ್ಯಂತರ ರೂಪಾಯಿ ಆಸ್ತಿ ಬೇರೆ ದೇಶದ ಮುಖ್ಯಸ್ಥನಿಗೆ ಯಾರ ಬಳಿ ಇದೆ.? ಎಂದು ಇಮ್ರಾನ್ ಖಾನ್ ಪ್ರಶ್ನಿಸಿದ್ದಾರೆ. ನವಾಜ್ ಷರೀಫ್ ವಿದೇಶದಲ್ಲಿ ಎಷ್ಟು ಆಸ್ತಿ ಹೊಂದಿದ್ದಾರೆ ಎಂಬುದನ್ನ ಯಾರೂ ಊಹಿಸಲು ಸಾಧ್ಯವಿಲ್ಲ ಎಂದರು.

ಈ ಹಿಂದೆ ಭಾರತವು ತನ್ನ ಸ್ವತಂತ್ರ ವಿದೇಶಾಂಗ ನೀತಿಗಾಗಿ ಮತ್ತು ಪಾಶ್ಚಿಮಾತ್ಯರ ಒತ್ತಡದ ನಡುವೆ ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲವನ್ನು ಖರೀದಿಸಿದ್ದಕ್ಕಾಗಿ ಈ ಮೊದಲು ಅವರು ಹೊಗಳಿದ್ದರು.

ಕಳೆದ ಏಪ್ರಿಲ್‌ನಲ್ಲಿಯೂ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಭಾರತೀಯರು ಬಹಳ ಸ್ವಾಭಿಮಾನಿ ಜನರು ಎಂದು ಶ್ಲಾಘಿಸಿದ್ದರು. ಯಾವುದೇ ಮಹಾಶಕ್ತಿಯು ನೆರೆಯ ದೇಶ ಭಾರತಕ್ಕೆ ಷರತ್ತುಗಳನ್ನು ವಿಧಿಸಲು ಸಾಧ್ಯವಿಲ್ಲ. ನಾವು ಮತ್ತು ಭಾರತ ಒಟ್ಟಿಗೆ ನಮ್ಮ ಸ್ವಾತಂತ್ರ್ಯವನ್ನು ಪಡೆದುಕೊಂಡಿದ್ದೇವೆ. ಆದರೆ, ಪಾಕಿಸ್ತಾನವನ್ನು ಟಿಶ್ಯೂ ಪೇಪರ್ ಆಗಿ ಬಳಸಿ, ಎಸೆಯಲಾಗುತ್ತದೆ. ಭಾರತ ಎಲ್ಲ ಕ್ಷೇತ್ರದಲ್ಲೂ ಮುಂದುವರೆಯುತ್ತಲೇ ಇದೆ ಎಂದು ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!