ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರು ದೇಶದ ಜನತೆಗೆ ವಿಶೇಷ ಸಂದೇಶವೊಂದನ್ನು ನೀಡಿದ್ದಾರೆ.
ಯೋಗ ದಿನದ ಪ್ರಯುಕ್ತ ಟ್ವೀಟ್ ಮಾಡಿರುವ ಅವರು, ನನ್ನ ಸಹ ಭಾರತೀಯರಿಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ನಾನು 91ನೇ ವಯಸ್ಸಿನಲ್ಲಿದ್ದೇನೆ ಮತ್ತು ನಾನಿನ್ನೂ ಆರೋಗ್ಯವಾಗಿರಲು ಯೋಗವು ಸಹಾಯ ಮಾಡಿದೆ. ಯೋಗವನ್ನು ಮಾಡಿ, ಅದರ ಲಾಭವನ್ನು ಪಡೆದುಕೊಳ್ಳಲು ನಾನು ಎಲ್ಲರನ್ನೂ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.
ಪ್ರತಿ ವರ್ಷ ಜೂನ್ 21ರಂದು ವಿಶ್ವದೆಲ್ಲೆಡೆ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಣೆ ಮಾಡಲಾಗುತ್ತದೆ. ಜನತೆಗೆ ಯೋಗದ ಪ್ರಾಮುಖ್ಯತೆಯ ಅರಿವು ಮೂಡಿಸುವ ಹಿನ್ನೆಲೆಯಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ.