ಚಂದ್ರಯಾನ-3 ಯಶಸ್ವಿಯಾಗಲೆಂದು ಶುಭಹಾರೈಸಿದ ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಡೀ ವಿಶ್ವವೇ ಎದುರು ನೋಡುತ್ತಿರುವ ಭಾರತದ ಮಹತ್ವಾಕಾಂಕ್ಷೆಯ ʼಚಂದ್ರಯಾನ-3ʼ ಮಿಷನ್‌ ಯಶಸ್ವಿಯಾಗಲೆಂದು ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡ ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ಇಸ್ರೋ ವಿಶ್ವ ದರ್ಜೆಯ ವೈಜ್ಞಾನಿಕ ಸಂಸ್ಥೆಯಾಗಿದ್ದು, ದಶಕಗಳಿಂದ ನಮಗೆಲ್ಲರಿಗೂ ಹೆಮ್ಮೆ ತಂದಿದೆ. ಅವರ ಅಮೋಘ ಸಾಧನೆಗಳು ನಮ್ಮನ್ನು ವಿಶ್ವದ ಅಗ್ರಸ್ಥಾನದಲ್ಲಿರಿಸಿದೆ. ದೇವರು ನಮ್ಮ ರಾಷ್ಟ್ರ ಮತ್ತು ನಮ್ಮ ವಿಜ್ಞಾನಿಗಳನ್ನು ಆಶೀರ್ವದಿಸಲಿ” ಎಂದು ಮಾಜಿ ಪ್ರಧಾನಿ ಹೆಚ್​ ಡಿ ದೇವೇಗೌಡ ಶುಭ ಕೋರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!