ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಇಸ್ರೇಲ್ ನ ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ತಮ್ಮ ಅಧಿಕೃತ ನಿವಾಸವನ್ನು ತೆರವುಗೊಳಿಸಿದ್ದಾರೆ.
ಈ ಬಗ್ಗೆ ನೆತನ್ಯಾಹು ವಕ್ತಾರರು ಮಾಹಿತಿ ನೀಡಿದ್ದು, ಬಾಲ್ಫೋರ್ ಸ್ಟ್ರೀಟ್ನಲ್ಲಿರುವ ನಿವಾಸದಿಂದ ನೆತನ್ಯಾಹು ಹೊರ ನಡೆದಿದ್ದಾರೆ. ಕಳೆದ ತಿಂಗಳು ನೂತನ ಪ್ರಧಾನಿಯಾಗಿ ನಫ್ತಾಲಿ ಬೆನೆಟ್ ಅವರು ಅಧಿಕಾರ ಸ್ವೀಕರಿಸಿದ್ದು, ಇದೀಗ ಜೆರುಸಲೇಂನಲ್ಲಿರುವ ನಿವಾಸವನ್ನು ಖಾಲಿ ಮಾಡಿದ್ದಾರೆ.
ಪ್ರಧಾನಿ ಸ್ಥಾನದಿಂದ ಕೆಳಗಿಳಿದ ಬಳಿಕ ಹೆಚ್ಚು ಕಾಲ ಸರ್ಕಾರಿ ನಿವಾಸದಲ್ಲೇ ಇದ್ದ ಮಾಜಿ ಪ್ರಧಾನಿ ನೆತನ್ಯಾಹು ಎಂದೆನಿಸಿಕೊಂಡಿದ್ದಾರೆ.
ಇಸ್ರೇಲ್ ನಲ್ಲಿ ಸುದೀರ್ಘ 12 ವರ್ಷಗಳ ಕಾಲ ಪ್ರಧಾನಿಯಾಗಿದ್ದ ಬೆಂಜಮಿನ್ ನೆತನ್ಯಾಹು ಅವರ ಅವಧಿ ಜೂನ್ ನಲ್ಲಿ ಅಂತ್ಯವಾಗಿದೆ.