ಮಾಜಿ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್ ಅವರು ಆಮ್‌ ಆದ್ಮಿ(ಎಎಪಿ) ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್‌ ಸಮ್ಮುಖದಲ್ಲಿ ಸೋಮವಾರ ಅಧಿಕೃತವಾಗಿ ಪಕ್ಷವನ್ನು ಸೇರಿದರು.
ರೈಲ್ವೆ ಪೊಲೀಸ್‌ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ)ಯಾಗಿದ್ದ ಭಾಸ್ಕರ್‌ ರಾವ್ ಅವಧಿಗೂ ಮುನ್ನವೇ ಸ್ವಯಂ ನಿವೃತ್ತಿ ಪಡೆದಿದ್ದರು. ಈ ಬೆನ್ನಲ್ಲೇ ರಾಜಕೀಯ ಕ್ಷೇತ್ರ ಪ್ರವೇಶಿಸಿರುವ ದೆಹಲಿಯಲ್ಲಿ ಅವರು, ದೆಹಲಿಯಲ್ಲಿ ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ದೆಹಲಿ ಡಿಸಿಎಂ ಮನೀಷ್‌ ಸಿಸೋಡಿಯಾ, ಪಕ್ಷದ ಕರ್ನಾಟಕ ಚುನಾವಣಾ ಉಸ್ತುವಾರಿಗಳಾದ ದಿಲೀಪ್‌ ಪಾಂಡೆ, ಕರ್ನಾಟಕ ಎಎಪಿ ಅಧ್ಯಕ್ಷರಾದ ಪೃಥ್ವಿ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!