ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ವಿದ್ವಾಂಸ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

ಹೊಸದಿಗಂತವರದಿ ಮಂಗಳೂರು:

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಜಾನಪದ ವಿದ್ವಾಂಸ, ಸಾಹಿತಿ, ಶಿಕ್ಷಕ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ (79) ಮಂಗಳವಾರ ನಿಧನರಾಗಿದ್ದಾರೆ.

ಅವರು ಪತ್ನಿ ಸುಮಾ ಆರ್. ಆಚಾರ್, ಪುತ್ರಿಯರಾದ ಕಿರಣ ಪಿ.ಆರ್, ಸುಪ್ರಿಯ ಪಿ.ಆರ್, ಪುತ್ರ ಹರ್ಷವರ್ಧನ ಪಿ.ಆರ್ ಹಾಗೂ ಅಳಿಯ ಕೃಷ್ಣ ಎಂ.ವಿ, ಜಯಪಾಲ್ ಎಚ್.ಆರ್. ಸೊಸೆ ಸುಧಾ ಟಿ.ಜೆ ಹಾಗೂ ಮೊಮ್ಮಕ್ಕಳು ಸುಹೃತ್, ಸಹಜ, ನಿಸ್ವನ, ಅವಲೋಕಿತ, ನಲ್ಮೆ‌ ಅವರ ಸಹಿತ ಅಪಾರ ಬಂಧುಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ಅವರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ 12 ಗಂಟೆಗೆ ಅವರ ಮನೆಯಾದ ದಕ್ಷಿಣ ಕನ್ನಡ ಜಿಲ್ಲಡಯ ಪುತ್ತೂರು ತಾಲ್ಲೂಕಿನ ಪಾಲ್ತಾಡಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!