ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಗೆ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆ ಸೋಂಕು ಹಾಗೂ ತೀವ್ರ ಜ್ವರದಿಂದಾಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿಅವರ ಪತಿ ದೇವಿಸಿಂಗ್ ಶೇಖಾವತ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಪಾಟೀಲ್ ಅವರು 2007 ರಿಂದ 2012 ರವರೆಗೆ ಸೇವೆ ಸಲ್ಲಿಸಿದ ಭಾರತದ ಗೌರವಾನ್ವಿತ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಇತಿಹಾಸವನ್ನು ನಿರ್ಮಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!