ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಕೇಂದ್ರ ಆರೋಗ್ಯ ಸಚಿವ ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿದರು.
ಸಭೆಯಲ್ಲಿ, ಶಾಸನ ಮತ್ತು ಪ್ರಮುಖ ರಾಜಕೀಯ ಬೆಳವಣಿಗೆಗಳ ಕುರಿತು ವಿಚಾರಗಳನ್ನು ವಿನಿಮಯ ಮಾಡಿಕೊಂಡರು.
“ನಾನು ಇಂದು ನವದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಶ್ರೀ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದೇನೆ. ಕೆಲವು ಶಾಸನಗಳು ಮತ್ತು ಪ್ರಮುಖ ರಾಜಕೀಯ ಬೆಳವಣಿಗೆಗಳ ಕುರಿತು ನಾವು ಮುಕ್ತ ವಿಚಾರ ವಿನಿಮಯ ಮಾಡಿಕೊಂಡಿದ್ದೇವೆ” ಎಂದು ದೇವೇಗೌಡರು ಹೇಳಿದ್ದಾರೆ.
ಇಂದು ಮುಂಜಾನೆ ದೇವೇಗೌಡರು ಕೇಂದ್ರ ಗೃಹ ಸಚಿವರು ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
“ನಾನು ಇಂದು ಗೃಹ ಸಚಿವ ಶ್ರೀ ಅಮಿತ್ ಶಾ ಅವರ ಜೊತೆ ಸೌಹಾರ್ದಯುತ ಸಭೆ ನಡೆಸಿದ್ದೇನೆ. ನಾವು ಕರ್ನಾಟಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದೇವೆ” ಎಂದು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.