August 31, 2026
Monday, August 31, 2026
spot_img

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯ ಸ್ಥಿತಿ ಗಂಭೀರ, ಐಸಿಯುನಲ್ಲಿ ಚಿಕಿತ್ಸೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಉಸಿರಾಟದ ಸಮಸ್ಯೆಯಿಂದಾಗಿ ಮೂರು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಚೆನ್ನಮ್ಮ ಅವರ ದೇಹ ಸ್ಪಂದನೆ ನೀಡುತ್ತಿಲ್ಲ ಎನ್ನಲಾಗಿದೆ.

ಇನ್ನು ಸಚಿವ ಎಚ್‌.ಡಿ. ಕುಮಾರಸ್ವಾಮಿ ಇಂದು ತಮ್ಮೆಲ್ಲಾ ಸಭೆ ಹಾಗೂ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಆಸ್ಪತ್ರೆಯಲ್ಲಿ ತಾಯಿಯ ಜತೆ ಇದ್ದಾರೆ.

ಶುಕ್ರವಾರ ಮಧ್ಯಾಹ್ನದಿಂದ ತಡರಾತ್ರಿವರೆಗೂ ದೇವೇಗೌಡರ ಕುಟುಂಬ ಆಸ್ಪತ್ರೆಯಲ್ಲಿಯೇ ಇದೆ. ಇಂದು ಹತ್ತು ಗಂಟೆಯ ನಂತರ ಆಡಳಿತದಿಂದ ಆರೋಗ್ಯ ಕುರಿತಾದ ಸ್ಟೇಟ್‌ಮೆಂಟ್‌ ಹೊರಬೀಳಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !