October 9, 2026
Friday, October 9, 2026
spot_img

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲು

ಕಳೆದ ಎರಡು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ದೇವೇಗೌಡ ಅವರಿಗೆ ನಿನ್ನೆ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ:

ಆರೋಗ್ಯ ಸ್ಥಿರ, ವೈದ್ಯರ ನಿಗಾ ಮುಂದುವರಿಕೆ

ವೈದ್ಯರು ಪರೀಕ್ಷಿಸಿದ ಬಳಿಕ ಮುಂದಿನ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುವಂತೆ ಸೂಚಿಸಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ.

ಈ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಹೆಚ್.ಡಿ. ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

Must Read