ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಅವರ ಪತ್ನಿ ಚಿನ್ನಮ್ಮ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ನೆರವೇರಿಸಲಿದ್ದಾರೆ.
ನಿನ್ನೆ ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ಅವರು, ಇಂದು ಮುಂಜಾನೆ ದೇಗುಲಕ್ಕೆ ಆಗಮಿಸಿ, ಮಹಾಪೂಜೆ ಹಾಗೂ ಇನ್ನಿತರ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.