ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅನಾರೋಗ್ಯದ ಕಾರಣದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಗುಣಮುಖರಾದ ಕಾರಣ, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಫೆಬ್ರವರಿ.15ರಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು.ಕೂಡಲೇ ಅವರನ್ನು ಬೆಂಗಳೂರಿಮ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ತಪಾಸಣೆಗೆ ಒಳಪಡಿಸಿದ್ದಂತ ವೈದ್ಯರು, ಚಿಕಿತ್ಸೆಯನ್ನು ನೀಡಿದ್ದರು. ಇಂದು ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!