ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರಿಂದ ನೈಸ್ ಸಂಸ್ಥೆಯ ಗೌರವಕ್ಕೆ ಧಕ್ಕೆ: ಕಂಪನಿಗೆ 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ.
ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ ಧಕ್ಕೆ ಬರುವಂತೆ ಹೇಳಿಕೆ ನೀಡಿದ್ದಾರೆ ಎಂದು ಕಂಪನಿಯು ಆರೋಪಿಸಿ, 10 ಕೋಟಿ ಮಾನನಷ್ಟ ಪರಿಹಾರ ಕೋರಿ ಅರ್ಜಿ ಸಲ್ಲಿಸಿತ್ತು.
ಕಂಪನಿಯ ಮೇಲೆ ಮಾಡಿದ್ದ ಆರೋಪವು ಸತ್ಯವೆಂದು ದೇವೇಗೌಡರು ಸಾಬೀತುಪಡಿಸಿಲ್ಲ. ಹೀಗಾಗಿ 2 ಕೋಟಿ ನಷ್ಟಪರಿಹಾರ ನೀಡಬೇಕೆಂದು ತೀರ್ಪು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶರಾದ ಮಲ್ಲನಗೌಡ ತೀರ್ಪು ನೀಡಿದರು. ಸಿವಿಲ್ ಮಾನನಷ್ಟ ದಾವೆಯು 2012ರಲ್ಲಿ ದಾಖಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss