ಮೈತ್ರಿ ಪಕ್ಷದ ನಾಯಕರ ವರ್ತನೆಗೆ ಮಾಜಿ ಪ್ರಧಾನಿ ಹೆಚ್‍ಡಿಡಿ ಬೇಸರ: ಕಾರಣ ಏನು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈತ್ರಿ ಪಕ್ಷದ ನಾಯಕರ ವರ್ತನೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಾಸನದಲ್ಲಿ ಬಿಜೆಪಿಯಿಂದ ಕೆಲವರು ಸಹಕಾರ ನೀಡುತ್ತಿಲ್ಲ, ಮಂಡ್ಯದಲ್ಲಿ ಸುಮಲತಾ ಕುಮಾರಸ್ವಾಮಿ ಅವರಿಗೆ ಸಹಕಾರ ನೀಡುತ್ತಿಲ್ಲ. ಸುಮಲತಾ ಅವರು ಪ್ರಚಾರಕ್ಕೆ ಬಾರದಿದ್ದರೂ ಕುಮಾರಸ್ವಾಮಿ ಅವರಿಗೆ ಅಪಾಯವಿಲ್ಲ ಎಂದರು.

ಹಾಸನದಲ್ಲಿ ಬಿಜೆಪಿಯ ಒಬ್ಬರು ವಿರೋಧ ಮಾಡ್ತಾರೆ ಅಂತ ನೀವು ಕೇಳಬಹುದು, ನಾನೇ ಹೇಳ್ತೀನಿ. ಇಂದು ಕಾವೇರಿ ಬೇಸಿನ್‍ನಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿಯ ಕೆಲವು ವ್ಯಕ್ತಿಗಳು ಹಾಸನದಲ್ಲಿ ಕೋ ಆಪರೇಟ್ ಮಾಡ್ತಿಲ್ಲ.

ಜೀವನ್ಮರಣದ ವಿಷಯವಾದ ಕಾವೇರಿ ಸಮಸ್ಯೆ ಪ್ರಮುಖ ಪ್ರಶ್ನೆಯಾಗಿದೆ. ಮಂಡ್ಯದಲ್ಲಿ ಕೈ ಅಭ್ಯರ್ಥಿ ಗೆಲ್ಲಲು 140 ಕೋಟಿ ಎನ್‍ಓಸಿ ರಿಲೀಸ್ ಮಾಡಿದ್ದಾರೆ. ದೇಶದ ಸಂಪತ್ತನ್ನು ಹಂಚುತ್ತೇವೆ ಎಂದು ಕಾಂಗ್ರೆಸ್‍ನವರು ಜಗಳವಾಡುತ್ತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬರಲು ಶಕ್ತಿನೇ ಇಲ್ಲ. ಆದರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ ಎಮದು ವಾಗ್ದಾಳಿ ನಡೆಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!