ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 107ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
ಪಿಎಂ ಮೋದಿ ಅವರು ತಮ್ಮ ಎಕ್ಸ್ ನಲ್ಲಿ, “ನಮ್ಮ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಜಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ನನ್ನ ಗೌರವ ನಮನಗಳು” ಎಂದು ಬರೆದಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಂದು ಇಂದಿರಾಗಾಂಧಿ ಅವರ ಜನ್ಮದಿನದಂದು ಶಕ್ತಿ ಸ್ಥಳಕ್ಕೆ ಭೇಟಿ ನೀಡಿ ಶ್ರದ್ಧಾಂಜಲಿ ಸಲ್ಲಿಸಿದರು.
ಖರ್ಗೆ ಅವರು ತಮ್ಮ ಎಕ್ಸ್ ನಲ್ಲಿ, “ಕೋಟಿಗಟ್ಟಲೆ ಭಾರತೀಯರು ‘ಭಾರತದ ಉಕ್ಕಿನ ಮಹಿಳೆ’ ಇಂದಿರಾ ಗಾಂಧಿಯವರ ಜೀವನದಿಂದ ಸ್ಫೂರ್ತಿ ಪಡೆಯುತ್ತಾರೆ, ಏಕೆಂದರೆ ಅವರು ದೇಶ ನಿರ್ಮಾಣಕ್ಕೆ ನಿಸ್ವಾರ್ಥವಾಗಿ ಕೊಡುಗೆ ನೀಡಿದ ಜೀವನಪರ್ಯಂತ ಹೋರಾಟ, ಧೈರ್ಯ ಮತ್ತು ಕ್ರಿಯಾತ್ಮಕ ನಾಯಕತ್ವದ ಸಾರಾಂಶವಾಗಿದ್ದರು. ಭಾರತದ ಏಕತೆ ಮತ್ತು ಸಮಗ್ರತೆಯನ್ನು ಕಾಪಾಡಲು ಆಕೆ ತನ್ನ ಪ್ರಾಣವನ್ನೇ ತ್ಯಾಗ ಮಾಡಿದರು” ಎಂದು ಬರೆದಿದ್ದಾರೆ.