ಹೊಸದಿಗಂತ ಆನ್ ಲೈನ್ ಡೆಸ್ಕ್:
ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ದಂಪತಿ ಇಂದು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದುಕೊಂಡಿದ್ದಾರೆ.
ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಮನಮೋಹನ್ ಸಿಂಗ್ ಹಾಗೂ ಅವರ ಪತ್ನಿ ಗುರ್ಷರನ್ ಕೌರ್ ಅವರು ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆ ಹಾಕಿಸಿಕೊಂಡಿದ್ದಾರೆ.
ದೇಶಾದ್ಯಂತ 2ನೇ ಹಂತದ ಕೊರೊನಾ ಲಸಿಕೆ ಅಭಿಯಾನ ಮಾ. 1ರಿಂದ ಆರಂಭವಾಗಿದೆ. ಈಗಾಗಲೇ ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಲಸಿಕೆ ಸ್ವೀಕರಿಸಿದ್ದಾರೆ.