ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾವಲ್ಪಿಂಡಿಯ ಸೇನಾ ಕೇಂದ್ರ ಕಚೇರಿಯ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಮಂಗಳವಾರ ಬಂಧಿಸಲಾಗಿದೆ.

ಅಧಿಕೃತ ರಹಸ್ಯ ಕಾಯ್ದೆ ಉಲ್ಲಂಘನೆ ಆರೋಪ ಕುರಿತ ಪ್ರಕರಣದಲ್ಲಿ (ಸೈಫರ್‌) ಇಮ್ರಾನ್‌ ಅವರ ಬಿಡುಗಡೆಗೆ ವಾರಂಟ್‌ ಜಾರಿಯಾದ ಕೂಡಲೇ ಜೈಲಿನಲ್ಲಿದ್ದ ಅವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.

ಮೇ 9ರಂದು ನಡೆದಿದ್ದ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಭಯೋತ್ಪಾದಕ ನಿಗ್ರಹ ನ್ಯಾಯಾಲಯವು (ಎಟಿಸಿ) ಇಮ್ರಾನ್‌ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಈ ಪ್ರಕರಣದ ವಿಚಾರಣೆಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಅವರು ಹಾಜರಾಗಿದ್ದಾರೆ.ಈ ಪ್ರಕರಣ‌ಕ್ಕೆ ಸಂಬಂಧಿಸಿ ಇಮ್ರಾನ್‌ ಅವರನ್ನು ವಶಕ್ಕೆ ನೀಡಬೇಕೆಂದು ಪೊಲೀಸರು ನ್ಯಾಯಾಲಯವನ್ನು ಕೋರಿದ್ದರು. ಆದರೆ ನ್ಯಾಯಾಲಯವು ಈ ಕೋರಿಕೆಯನ್ನು ನಿರಾಕರಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!