ಜಡ್ಜ್‌ಗೆ ಬೆದರಿಕೆ ಹಾಕಿದ ಪಾಕ್ ಮಾಜಿ ಪ್ರಧಾನಿ: ಇಮ್ರಾನ್‌ಗೆ ಜಾಮೀನು ರಹಿತ ಅರೆಸ್ಟ್ ವಾರೆಂಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಜಿಲ್ಲಾ ಕೋರ್ಟ್ ಜಡ್ಜ್‌ಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಯಾಗಿದೆ.

ಕಾನೂನು ಹೋರಾಟಕ್ಕಾಗಿ ಜಿಲ್ಲಾ ಸೆಶನ್ ಕೋರ್ಟ್‌ಗೆ ಹಾಜರಾಗಿದ್ದ ಇಮ್ರಾನ್ ಖಾನ್, ಮಹಿಳಾ ಜಡ್ಜ್ ವಿರುದ್ಧ ಅಕ್ಷೇಪಿತ ಪದ ಬಳಕೆ ಮಾಡಿದ್ದಾರೆ. ಹೀಗಾಗಿ ಜಿಲ್ಲಾ ಸೆಶನ್ ಕೋರ್ಟ್, ಇದೀಗ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಇದರ ಬೆನ್ನಲ್ಲೇ ಲಾಹೋರ್ ಪೊಲೀಸರು ಇಮ್ರಾನ್ ಖಾನ್ ವಿರುದ್ದ ಹೊಸ ಪ್ರಕರಣ ದಾಖಲಿಸಿದ್ದಾರೆ. ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಪಕ್ಷದ ಕಾರ್ಯಕರ್ತನ ಸಾವು ಪ್ರಕರಣ ಇದೀಗ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ವಿರುದ್ಧ ತಿರುಗಿದೆ. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಿಲ್ಲಾ ಸೆಶನ್ ಜಾಮೀನು ರಹಿತ ವಾರೆಂಟ್ ವಿರುದ್ಧ ಇಮ್ರಾನ್ ಖಾನ್ ಇದೀಗ ಹೈಕೋರ್ಟ್ ಮೊರೆ ಹೋಗುವ ಸಾಧ್ಯತೆ ದಟ್ಟವಾಗಿದೆ. ಇತ್ತ ಇಮ್ರಾನ್ ಖಾನ್ ಈಗಾಗಲೇ ಹಲವು ಪ್ರಕರಣಗಳ ತನಿಖೆ ಎದುರಿಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!