ಬಿಜೆಪಿಗೆ ಸೇರ್ಪಡೆಯಾದ ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್‌ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪಂಜಾಬ್‌ ವಿಧಾನಸಭೆ ಚುನಾವಣೆಗೂ ಮುನ್ನ ಅವರನ್ನು ಸಿಎಂ ಸ್ಥಾನದಿಂದ ತೆಗೆದುಹಾಕಿದ್ದಕ್ಕೆ ಕಾಂಗ್ರೆಸ್‌ ತೊರೆದಿದ್ದ ನಾಯಕ ನಂತರ ಪಂಜಾಬ್‌ ಲೋಕ ಕಾಂಗ್ರೆಸ್‌ ಎಂಬ ನೂತನ ಪಕ್ಷವನ್ನು ಸ್ಥಾಪಿಸಿದ್ದರು. ಬಳಿಕ ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದಾರೆ. ಇದೀಗ ಕಾಂಗ್ರೆಸ್‌ ತೊರೆದ ಒಂದು ವರ್ಷದ ನಂತರ ಕ್ಯಾಪ್ಟನ್‌ ಅಮರಿಂದರ್ ಸಿಂಗ್ ಕೇಸರಿ ಪಕ್ಷವನ್ನು ಸೇರಿದ್ದಾರೆ.
ಸೆಪ್ಟೆಂಬರ್ 19 ರ ಬೆಳಗ್ಗೆ ಬಿಜೆಪಿ ಮುಖ್ಯಸ್ಥ ಜೆ.ಪಿ. ನಡ್ಡಾ ಜತೆಗೆ ಭೇಟಿಯಾಗಿದ್ದ ಅಮರಿಂದರ್‌ ಸಿಂಗ್ ಕೇಸರಿ ಧ್ವಜವನ್ನು ಹಿಡಿದಿದ್ದಾರೆ. ಇನ್ನು, ಕೇಂದ್ರ ಸಚಿವರಾದ ಕಿರಣ್‌ ರಿಜಿಜು ಹಾಗೂ ನರೇಂದ್ರ ತೋಮರ್‌ ಮತ್ತು ಬಿಜೆಪಿ ನಾಯಕ ಸುನೀಲ್‌ ಜಾಖರ್‌ ಹಾಗೂ ಪಂಜಾಬ್‌ ಬಿಜೆಪಿ ಮುಖ್ಯಸ್ಥ ಅಶ್ವಾನಿ ಶರ್ಮಾ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಅವರನ್ನು ಅಧಿಕೃತವಾಗಿ ಸ್ವಾಗತಿಸಿದ್ದಾರೆ.
ಅಮರಿಂದರ್ ಸಿಂಗ್ ಜತೆಗೆ 7 ಮಾಜಿ ಶಾಸಕರು ಹಾಗೂ ಒಬ್ಬರು ಮಾಜಿ ಸಂಸದರು ಸಹ ಬಿಜೆಪಿ ಸೇರ್ಪಡೆಯಾಗಿದ್ದಾರೆ ಎಂದೂ ತಿಳಿದುಬಂದಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!