ಪಂಜಾಬ್ ಮಾಜಿ ಸಿಎಂ ಕ್ಯಾ. ಅಮರಿಂದರ್ ಸಿಂಗ್ ಅವರ ಪತ್ನಿ ಪ್ರಣೀತ್ ಕೌರ್ ಗೆ ಕಾಂಗ್ರೆಸ್ ನಿಂದ ಗೇಟ್ ಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪತ್ನಿ, ಸಂಸದೆ ಪ್ರಣೀತ್ ಕೌರ್ ಅವರನ್ನು ಕಾಂಗ್ರೆಸ್ ಶುಕ್ರವಾರ ಪಕ್ಷದಿಂದ ಅಮಾನತುಗೊಳಿಸಿದೆ.
ಪಟಿಯಾಲಾ ಸಂಸದೆ ಪ್ರಣೀತ್ ಕೌರ್ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸಹಾಯ ಮಾಡುವ ಮೂಲಕ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಿಸ್ತು ಕ್ರಮ ಸಮಿತಿಯು ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!