Tuesday, February 27, 2024

ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೆಗೆ 51,000 ಮತಗಳ ಅಂತರದ ಜಯ 

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ (Vasundhara Raje Scindia) ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು ಮತಗಳ (Votes) ಅಂತರದಿಂದ ಗೆಲುವು ಸಾಧಿಸಿದ್ದಾರೆ. ಅಧಿಕೃತ ಘೋಷಣೆ

ಈ ಗೆಲುವಿನಿಂದ ಝಲ್ರಾಪಟನ್ ಕ್ಷೇತ್ರವೂ ಬಿಜೆಪಿಯ ಭದ್ರಕೋಟೆ ಎಂಬುದನ್ನು ಸಾಬೀತು ಮಾಡಿದ್ದಾರೆ. 2003ರಿಂದ ಝಲ್ರಾಪಟನ್ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ವಸುಂಧರಾ ಅವರು ಸತತ ಗೆಲುವಿನ ಓಟ ಮುಂದುವರಿಸಿದ್ದಾರೆ.

ಈ ಕುರಿತು ಮಾತನಾಡಿರುವ ವಸುಂಧರಾ ರಾಜೇ ಸಿಂಧಿಯಾ ಅವರು, ಇದು ಪ್ರಧಾನಿ ಮೋದಿ ಅವರ ಸಬ್ಕಾ ಸಾಥ್‌, ಸಬ್ಕಾ ವಿಶ್ವಾಸ್‌, ಸಬ್ಕಾ ಪ್ರಯಾಸ್‌ʼ ಮಂತ್ರ ತಂದ ಗೆಲುವು. ಇದು ಮೋದಿ ಗ್ಯಾರಂಟಿಯ (Modi Guarantee) ಗೆಲುವು, ಅಮಿತ್‌ ಶಾ (Amit Shah) ಕಾರ್ಯತಂತ್ರದ ಗೆಲುವು, ನಡ್ಡಾ ಜೀ ಅವರ ಸಮರ್ಥ ನಾಯಕತ್ವಕ್ಕೆ ಸಿಕ್ಕ ಗೆಲುವು, ಮುಖ್ಯವಾಗಿ ನಮ್ಮ ಪಕ್ಷದ ಕಾರ್ಯಕರ್ತರ ಗೆಲುವು ಎಂದು ಹೇಳಿದ್ದಾರೆ.

ರಾಜಸ್ಥಾನವು ಒಟ್ಟು 199 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿದ್ದು, ಬಹುಮತಕ್ಕೆ 100 ಸ್ಥಾನಗಳ ಅಗತ್ಯವಿದೆ. ಭಾನುವಾರ ಮಧ್ಯಾಹ್ನ 3 ಗಂಟೆ ನಂತರ ಫಲಿತಾಂಶದಲ್ಲಿ ಬಿಜೆಪಿ 115 ಸ್ಥಾನಗಳೊಂದಿಗೆ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್‌ 69, ಇತರೆ 15 ಸ್ಥಾನಗಳಲ್ಲಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!