ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದ ಆರ್‌ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ 

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ರಾಜಸ್ಥಾನದಲ್ಲಿ ಮುಂದುವರೆದಿದೆ. ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ರಘುರಾಮ್ ರಾಜನ್ ಇಂದು ಬೆಳಗ್ಗೆ ಪಾದಯಾತ್ರೆಯಲ್ಲಿ ರಾಹುಲ್‌ ಗಾಂಧಿ ಜೊತೆ ಹೆಜ್ಜೆ ಹಾಕಿದರು. ಇಂದು ಬೆಳಗ್ಗೆ ರಾಜಸ್ಥಾನದ ಸವಾಯಿ ಮಾಧೋಪುರ, ಭಡೋತಿಯಿಂದ ಪಾದಯಾತ್ರೆ ಆರಂಭವಾಯಿತು.

ರಾಹುಲ್ ಗಾಂಧಿಯವರ ಪಾದಯಾತ್ರೆಗೆ ರಾಜಸ್ಥಾನದಲ್ಲಿ ಜನರಿಂದ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ರಾಹುಲ್ ಜತೆಗೆ ಕಾಂಗ್ರೆಸ್ ಮುಖಂಡರು, ರೈತ ಸಂಘಗಳ ಪ್ರತಿನಿಧಿಗಳು ಸೇರಿದಂತೆ ಪ್ರಮುಖರು ಪಾದಯಾತ್ರೆಯಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಸೆಪ್ಟೆಂಬರ್ 7ರಿಂದ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಆರಂಭಿಸಿದ್ದು, ಚುನಾವಣೆಯನ್ನು ಲೆಕ್ಕಿಸದೆ, ದೇಶದ ಜನರನ್ನು ಒಗ್ಗೂಡಿಸಲು ಈ ಯಾತ್ರೆ ಮಾಡುತ್ತಿದ್ದೇವೆ ಅಂತಿದಾರೆ ಕಾಂಗ್ರೆಸ್ ನಾಯಕರು. ಯಾತ್ರೆಯು 12 ರಾಜ್ಯಗಳಲ್ಲಿ 3,570 ಕಿಲೋಮೀಟರ್‌ಗಳನ್ನು ಒಳಗೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!