ಸೇಡಂನ ಮಾಜಿ ಶಾಸಕ ನಾಗರೆಡ್ಡಿ ಪಾಟೀಲ್​ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಸೇಡಂ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಡಾ.ನಾಗರೆಡ್ಡಿ ಪಾಟೀಲ್ ​(79) ಅವರು ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.

1983-85ರ ಅವಧಿಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಎರಡೂವರೆ ವರ್ಷ ಶಾಸಕರಾಗಿದ್ದರು. ನಾಗರೆಡ್ಡಿ ಅವರು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಗೌರವ ಅಧ್ಯಕ್ಷರೂ ಆಗಿದ್ದರು. ಮಧ್ಯಾಹ್ನ 3.30ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೊನಿ ಪಕ್ಕದ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!