Thursday, March 23, 2023

Latest Posts

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ನಿಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ (Ramesh Kumar) ಅವರ ಪತ್ನಿ ನಿಧನರಾಗಿದ್ದಾರೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಶಾಸಕ ಕೆ. ಆರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ(69) ಇಂದು (ಶುಕ್ರವಾರ) ಮಧ್ಯಾಹ್ನ ಮೃತಪಟ್ಟಿದ್ದಾರೆ.

ಕಳೆದ 2 ತಿಂಗಳಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಎರಡು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 2 ಗಂಟೆಗೆ ಕೊನೆಯುಸಿರೆಳೆದಿದ್ದಾರೆ.
ಮೃತರು ಪತಿ, ಓರ್ವ ಮಗಳು, ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!