ಹೊಸದಿಗಂತ ಡಿಜಿಟಲ್ ಡೆಸ್ಕ್:
ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಶ್ರೀಲಂಕಾದ ಮಾಜಿ ಅಧ್ಯಕ್ಷ ರನಿಲ್ ವಿಕ್ರಮಸಿಂಘ (76) ಅವರನ್ನು ಶನಿವಾರ ಕಾರಾಗೃಹದ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಕ್ರಮಸಿಂಘ ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದು, ರಕ್ತದಲ್ಲಿ ಸಕ್ಕರೆಯ ಅಂಶ ಹೆಚ್ಚಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲು ವಕ್ತಾರ ತಿಳಿಸಿದ್ದಾರೆ.
ಕೊಲಂಬೊ ಫೋರ್ಟ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರನಿಲ್ ಅವರಿಗೆ ಜಾಮೀನು ನೀಡಲು ನಿರಾಕರಿಸಿ, ಅವರಿಗೆ ಆಗಸ್ಟ್ 26ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಹೀಗಾಗಿ, ಶುಕ್ರವಾರ ಮಧ್ಯರಾತ್ರಿಯೇ ಅವರನ್ನು ಜೈಲಿಗೆ ಕರೆದೊಯ್ಯಲಾಗಿತ್ತು.