ಚುನಾವಣೆಯ ಪ್ರಚಾರದಿಂದ ತೆಲಂಗಾಣ ಮಾಜಿ ಸಿಎಂ ಕೆಸಿಆರ್​ಗೆ ನಿಷೇಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:
 
ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸದಂತೆ ತೆಲಂಗಾಣದ ಮಾಜಿ ಸಿಎಂ ಕೆಸಿಆರ್​ಗೆ (KCR) ಚುನಾವಣಾ ಆಯೋಗ ನಿಷೇಧ ಹೇರಿದೆ.

ಮುಂದಿನ 48 ಗಂಟೆ ಕಾಲ ಪ್ರಚಾರದಲ್ಲಿ ಭಾಗಿಯಾಗದಂತೆ ಕೆಸಿಆರ್‌ಗೆ ಕೇಂದ್ರ ಚುನಾವಣಾ ಆಯೋಗ ನಿರ್ಬಂಧ ವಿಧಿಸಿದೆ.
ಕಾಂಗ್ರೆಸ್‌ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕೆಸಿಆರ್‌ಗೆ ಈ ನಿರ್ಬಂಧ ವಿಧಿಸಲಾಗಿದ್ದು, ಇಂದು ರಾತ್ರಿ 8 ಗಂಟೆಯಿಂದ 48 ಗಂಟೆ ಕಾಲ ಅವರು ಪ್ರಚಾರ ನಡೆಸುವಂತಿಲ್ಲ.

ಏಪ್ರಿಲ್ 5ರಂದು ಕೆಸಿಆರ್ ನೀಡಿದ ಹೇಳಿಕೆಗಳಿಗೆ ಸಂಬಂಧಿಸಿದಂತೆ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿರಿಯ ಉಪಾಧ್ಯಕ್ಷ ಜಿ. ನಿರಂಜನ್ ಅವರ ದೂರಿನ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ಈ ಆದೇಶ ನೀಡಿದೆ. ಮೇ 1 ರಂದು ರಾತ್ರಿ 8 ರಿಂದ ಜಾರಿಗೆ ಬಂದ ನಿಷೇಧವನ್ನು ಮಾದರಿಯ ನೀತಿ ಸಂಹಿತೆ ಉಲ್ಲಂಘನೆಯ ಆಧಾರದ ಮೇಲೆ ಜಾರಿಗೊಳಿಸಲಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!