ಅಯೋಧ್ಯೆ ಬಾಲರಾಮನಿಗೆ ಕಾಷ್ಠ ಶಿಲ್ಪದ ತೊಟ್ಟಿಲು ಅರ್ಪಿಸಲಿದ್ದಾರೆ ಉಡುಪಿ ಮಾಜಿ ಶಾಸಕ ರಘುಪತಿ ಭಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉಡುಪಿಯ ನಿಕಟಪೂರ್ವ ಶಾಸಕ ಕೆ . ರಘುಪತಿ ಭಟ್ ಅವರು ಅಯೋಧ್ಯೆಯ ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠ ಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲಿದ್ದಾರೆ.

ರಾಜಸ್ಥಾನದ ಉದಯಪುರದಲ್ಲಿ ಬೀಟಿ ಮರದಿಂದ ನಿರ್ಮಿಸಲಾದ ಅತ್ಯಂತ ಸುಂದರ ಕಾಷ್ಠ ರಚನೆಗಳುಳ್ಳ ತೊಟ್ಟಿಲನ್ನು ರಘುಪತಿ ಭಟ್ ಖರೀದಿಸಿದ್ದು, ಫೆ .7 ರಂದು ಸಂಜೆ ನಡೆಯುವ ಉತ್ಸವದಲ್ಲಿ ಅರ್ಪಣೆಯಾಗಲಿದ್ದು, ಈ ವೇಳೆ ನೂತನ ತೊಟ್ಟಿಲಲ್ಲಿ ಬಾಲ ರಾಮ ದೇವರಿಗೆ ತೊಟ್ಟಿಲು ಸೇವೆ ನಡೆಸಲಾಗುವುದು ಎಂದು ರಘುಪತಿ ಭಟ್ ತಿಳಿಸಿದ್ದಾರೆ.

ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಯೋಧ್ಯಾ ರಾಮನ ಸನ್ನಿಧಿಯಲ್ಲಿ ನಡೆಯುತ್ತಿರುವ ಮಂಡಲೋತ್ಸವದ ವೈಭವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶ್ರೀಗಳ ಮಾರ್ಗದರ್ಶನದಂತೆ ಶ್ರೀ ಕಾಶೀ ಮಠಾಧೀಶರಾದ ಶ್ರೀ ಸಂಯಮೀಂದ್ರ ತೀರ್ಥ ಶ್ರೀಪಾದರು ರಜತ ಪಲ್ಲಕ್ಕಿಯನ್ನು ಅರ್ಪಿಸಲು ಸಿದ್ದರಾಗಿದ್ದು, ಇತ್ತ ಕಡೆ ಮಂಡಲೋತ್ಸವದಲ್ಲಿ ಸಂಘಟನಾತ್ಮಕವಾಗಿ ತೊಡಗಿಕೊಂಡಿರುವ ರಘುಪತಿ ಭಟ್ ಅವರು ಶ್ರೀರಾಮನ ತೊಟ್ಟಿಲು ಸೇವೆಗೆ ಕಾಷ್ಠಶಿಲ್ಪದಲ್ಲಿ ನಿರ್ಮಿಸಲಾದ ತೊಟ್ಟಿಲನ್ನು ಅರ್ಪಿಸಲು ಉತ್ಸುಕರಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!