Monday, August 8, 2022

Latest Posts

ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಇನ್ನಿಲ್ಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ವರದಿ ಮಂಗಳೂರು::

ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಸೋಮವಾರ ಮಧ್ಯಾಹ್ನ ನಿಧನ ಹೊಂದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಮಂಗಳೂರಿನ ಯೇನೆಪೋಯ ಆಸ್ಪತ್ರೆಯಲ್ಲಿ ಕಳೆದ ಒಂದೂವರೆ ತಿಂಗಳಿನಿಂದ ತೀವ್ರ ನಿಗಾ ಘಟಕದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

ಮೂಲತಃ ಉಡುಪಿ ಜಿಲ್ಲೆಯ ಉದ್ಯಾವರದವರಾಗಿದ್ದು, ಬ್ರಹ್ಮ ಗಿರಿಯ ನಿವಾಸಿಯಾದ ಆಸ್ಕರ್ ಅವರು1972ರಲ್ಲಿ ಉಡುಪಿ ಪುರಸಭೆಗೆ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದು, ಸರಳ ಸಜ್ಜನಿಕೆಯ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. 1980ರಲ್ಲಿ ಲೋಕಸಭೆಗೆ ಪ್ರವೇಶ ಮಾಡಿದ್ದ ಅವರು 1998ರಿಂದ ಸತತ ನಾಲ್ಕುಬಾರಿ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

2005ರಲ್ಲಿ ಸಚಿವ ಯುವಜನಾ ಸೇವೆ ಮತ್ತು ಕ್ರೀಡಾ ಸಚಿವರಾಗಿ, 2006ರ ಆಗಸ್ಟ್ 24ರಿಂದ 2009 ರ ಮಾರ್ಚ್2ವರೆಗೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆಯ ರಾಜ್ಯ ಸಚಿವರಾಗಿ ಆಸ್ಕರ್ ಸೇವೆ ಸಲ್ಲಿಸಿದ್ದರು.

ಆಸ್ಕರ್ ಫೆರ್ನಾಂಡಿಸ್ ಅವರು ಪತ್ನಿ ಬ್ಲಾಸಂ ಫೆರ್ನಾಂಡಿಸ್, ಪುತ್ರ ಮತ್ತು ಪುತ್ರಿ ಸೇರಿದಂತೆ ಬಂಧು ಬಳಗ ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss