ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದ ಮಾಜಿ ವಿದೇಶಾಂಗ ಕಾರ್ಯದರ್ಶಿ, ನೋಬೆಲ್ ಪ್ರಶಸ್ತಿ ವಿಜೇತ ಹೆನ್ರಿ ಕಿಸ್ಸಿಂಜರ್ (100) ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೆನ್ರಿ ಕಿಸ್ಸಿಂಜರ್ ಅವರು ವಾಷಿಂಗ್ಟನ್‌ನ ಕನೆಕ್ಟಿಕಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ (ನವೆಂಬರ್ 30) ನಿಧನರಾಗಿದ್ದಾರೆ ಎಂದು ಅವರ ಆಪ್ತರು ಮಾಹಿತಿ ನೀಡಿದ್ದಾರೆ.
ಅಮೆರಿಕದ ಪ್ರಭಾವಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಹೆನ್ರಿ ಕಿಸ್ಸಿಂಜರ್ ಅವರು ಎರಡನೇ ಮಹಾಯುದ್ಧದ ನಂತರ ಜಾಗತಿಕ ಬೆಳವಣಿಗೆಗಳ ಮೇಲೆ ಭಾರಿ ಪ್ರಭಾವ ಬೀರಿದ್ದಾರೆ. ಅದರಲ್ಲೂ, ಅಮೆರಿಕದ ರಾಜತಾಂತ್ರಿಕರಾಗಿ ವಿದೇಶಾಂಗ ನೀತಿಯಲ್ಲಿ ಕ್ರಾಂತಿಕಾರ ಬದಲಾವಣೆಗಳನ್ನು ತಂದ ಖ್ಯಾತಿ ಹೊಂದಿದ್ದಾರೆ.