ಬೆಂಗಳೂರು ವಿವಿಯ ಮಾಜಿ ಉಪಕುಲಪತಿ, ಶಿಕ್ಷಣ ತಜ್ಞ, ಪ್ರೊ.ಎಂ.ಎಸ್.ತಿಮ್ಮಪ್ಪ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ, ಶಿಕ್ಷಣ ತಜ್ಞ, ಪ್ರೊ.ಎಂ.ಎಸ್. ತಿಮ್ಮಪ್ಪ (83) ಅವರು ನಿಧನರಾಗಿದ್ದಾರೆ.

ಅಕ್ಟೋಬರ್ 11 ರಂದು ಮುಂಜಾನೆ ತಿಮ್ಮಪ್ಪ ಅವರು ಮನೆಯಲ್ಲಿ ಕಾಲು ಜಾರಿ ಬಿದ್ದು ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಧ್ಯರಾತ್ರಿ 1:50ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಪ್ರೊ. ತಿಮ್ಮಪ್ಪ ಅವರು ಎರಡು ಅವಧಿಗೆ ಬೆಂಗಳೂರು ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್​ ಆಗಿ ಮತ್ತು ಅದರ ಉಪಕುಲಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಹಲವಾರು ಡಾಕ್ಟರೇಟ್ ಮತ್ತು ಎಂಫಿಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ಹಲವು ವರ್ಷಗಳ ಕಾಲ ಮನೋವಿಜ್ಞಾನ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!