ವಿಧಾನ ಪರಿಷತ್ ಮಾಜಿ ಸದಸ್ಯ ಕಾಜಿ ಅರಶದ್ ಅಲಿ ಹೃದಯಾಘಾತದಿಂದ ನಿಧನ

ಹೊಸದಿಗಂತ ಬೀದರ್:

ವಿಧಾನ ಪರಿಷತ್ ಮಾಜಿ ಸದಸ್ಯ ಕಾಜಿ ಅರಶದ್ ಅಲಿ (75) ನಗರದಲ್ಲಿ ಸೋಮವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಗಳವಾರ (ಮಾ.4) ಮಧ್ಯಾಹ್ನ 1.30ಕ್ಕೆ ನಗರದ ಜಾಮಿಯಾ ಮಸೀದಿಯಲ್ಲಿ ಅವರ ‘ನಮಾಜ್ ಎ ಜನಾಜಾ’ ನಡೆಯಲಿದೆ. ಬಳಿಕ ಭಾಲ್ಕಿಯ ಅವರ ಜಮೀನಿನಲ್ಲಿರುವ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

ಬೀದರ್ ಕೀ ಆವಾಜ್ ಹಿಂದಿ ಹಾಗೂ ಸುರ್ಖ್ ಝಮೀನ್ ಉರ್ದು ದಿನಪತ್ರಿಕೆಯ ಸಂಪಾದಕರಾಗಿದ್ದ ಅವರು, ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯ, ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು. ಜಿಲ್ಲೆಯ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದರು.

ಕಾಜಿ ಅರಶದ್ ಅಲಿ ಅವರ ನಿಧನಕ್ಕೆ ಜಿಲ್ಲೆಯ ರಾಜಕೀಯ ಗಣ್ಯರು, ಪತ್ರಕರ್ತರು ಸೇರಿದಂತೆ ಅನೇಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!