ಹೊಸದಿಗಂತ, ವಿಜಯಪುರ:
ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಶಿವರಾಯ ಅಡಿವೆಪ್ಪ ಜಿದ್ದಿ (83) ಅವರು ಅನಾರೋಗ್ಯದಿಂದ ಭಾನುವಾರ ನಸುಕಿನ ಜಾವ ನಿಧನರಾದರು.
ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವಿದೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಿದ್ದಿ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಜಿದ್ದಿ ಅವರು 1994ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅಲ್ಲದೆ 1992ರಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಎರಡು ವರ್ಷ ವಿಜಯಪುರ ನಗರಾಭಿವೃದ್ಧಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಕಾಳಿದಾಸ ಶಿಕ್ಷಣ ಸಂಸ್ಥೆ ಹುಟ್ಟು ಹಾಕಿ ಬಡ ಹಾಗೂ ಹಿಂದುಳಿದ ಮಕ್ಕಳಿಗೆ ಉನ್ನತ ಶಿಕ್ಷಣವನ್ನು ನೀಡಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಕೊಡುಗೆ ನೀಡಿದ್ದಾರೆ. ಅನೇಕ ಗಣ್ಯರು ಜಿದ್ದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ