ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಜಿ ಅವರು ಇಂದು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅವರಿಗೆ 80 ವರ್ಷ ವಯಸ್ಸಾಗಿದ್ದು, ದೀರ್ಘಕಾಲದ ಉಸಿರಾಟದ ಸಮಸ್ಯೆಯಿಂದ ಹಲವಾರು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಬುದ್ಧದೇವ್ ಭಟ್ಟಾಚಾರ್ಜಿ ಅವರು ಪತ್ನಿ ಮೀರಾ ಮತ್ತು ಮಗಳು ಸುಚೇತನಾ ಅವರನ್ನು ಅಗಲಿದ್ದಾರೆ.