ಜಿಂಬಾಬ್ವೆ ಮಾಜಿ ಕ್ರಿಕೆಟಿಗನ ಮೇಲೆ ಚಿರತೆ ದಾಳಿ: ಗಂಭೀರ ಗಾಯ, ಆಸ್ಪತ್ರಗೆ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಿಂಬಾಬ್ವೆಯ ಮಾಜಿ ಕ್ರಿಕೆಟಿಗ ಗೈ ವಿಟ್ಟಲ್ ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಬದುಕುಳಿದಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತುರ್ತು ಶಸ್ತ್ರಚಿಕಿತ್ಸೆಗಾಗಿ ಜಿಂಬಾಬ್ವೆಯ ಬಫಲೋ ರೇಂಜ್‌ನಿಂದ ವಿಮಾನದ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಗಂಭೀರ ಗಾಯಗೊಂಡ ವಿಟ್ಟಲ್ ಚಿಕಿತ್ಸೆ ಪಡೆಯುತ್ತಿರುವ ಫೋಟೋಗಳನ್ನು ಅವರ ಪತ್ನಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಫೋಟೋದಲ್ಲಿ, ವಿಟ್ಟಲ್ ಬ್ಯಾಂಡೇಜ್ ಮತ್ತು ರಕ್ತಸಿಕ್ತ ಬಣ್ಣದ ಶರ್ಟ್ ಧರಿಸಿರುವುದು ಕಾಣಬಹುದಾಗಿದೆ. ಸದ್ಯ ಮಿಲ್ಟನ್ ಪಾರ್ಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!