Saturday, February 4, 2023

Latest Posts

ಜಿಲ್ಲಾ ಬಿಜೆಪಿ ಕಚೇರಿಗೆ ನಾಳೆ ಜೆ.ಪಿ.ನಡ್ಡಾ ಶಂಕುಸ್ಥಾಪನೆ

ಹೊಸದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲಾ ಬಿಜೆಪಿಯ ನೂತನ ಕಛೇರಿ ನಿರ್ಮಾಣಕ್ಕೆ ಡಿ.15 ರಂದು ನಗರದ ಶ್ರೀ ಓಂಕಾರೇಶ್ವರ ದೇವಾಲಯ ರಸ್ತೆಯಲ್ಲಿರುವ ಪಕ್ಷದ ನಿವೇಶನದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ತನ್ನದೇ ಆದ ಸ್ವಂತ ಕಛೇರಿಯನ್ನು ಹೊಂದುವ ಸಲುವಾಗಿ 8 ಸೆಂಟ್ಸ್ ಜಾಗದಲ್ಲಿ ಕಟ್ಟಡವನ್ನು ನಿರ್ಮಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಕೊಡಗು ಸೇರಿದಂತೆ 10 ಜಿಲ್ಲೆಗಳ ಬಿಜೆಪಿ ಕಛೇರಿಗಳ ನಿರ್ಮಾಣಕ್ಕೆ ವರ್ಚುವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಶಂಕುಸ್ಥಾಪನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ರಾಜ್ಯ ನಿಗಮ, ಮಂಡಳಿ ಅಧ್ಯಕ್ಷರು, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷರು, ಪಕ್ಷದ ಪ್ರಮುಖರು ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿಲ್ಲಾ ಉಪಾಧ್ಯಕ್ಷ ಬಿ.ಎ.ಅರುಣ್ ಕುಮಾರ್, ಜಿಲ್ಲಾ ವಕ್ತಾರ ಮಹೇಶ್ ಜೈನಿ, ಕಾರ್ಯದರ್ಶಿ ಎಸ್.ಸಿ.ಸತೀಶ್ ಹಾಗೂ ಮಾಧ್ಯಮ ಸಹ ಸಂಚಾಲಕ ಸಜಿಲ್ ಕೃಷ್ಣನ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!