ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಭಾರತೀಯ ಸೇನಾ ಯೋಧರು ಗಾಯಗೊಂಡಿದ್ದಾರೆ.
“ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಕಿಶ್ತ್ವಾರ್‌ನಲ್ಲಿರುವ ಚತ್ರೂ ಪ್ರದೇಶದಲ್ಲಿ J&K ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. 3:30ಕ್ಕೆ ಭಯೋತ್ಪಾದಕರೊಂದಿಗೆ ಸಂಪರ್ಕವನ್ನು ಸ್ಥಾಪಿಸಲಾಗಿದೆ. ನಂತರ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ” ಎಂದು ಭಾರತೀಯ ಸೇನೆಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.
ಖಂಡರಾ ಕಥುವಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎನ್ನಲಾಗಿದೆ.