4 ಲಕ್ಷ ರೂ.ಗೆ ಏಳು ವರ್ಷದ ಬಾಲಕನ ಮಾರಾಟ: ಬೆಳಗಾವಿಯಲ್ಲಿ ನಾಲ್ವರು ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಳೆದ ಮೂರು ತಿಂಗಳುಗಳಲ್ಲಿ ಬೆಳಗಾವಿಯಲ್ಲಿ ಮಕ್ಕಳ ಕಳ್ಳಸಾಗಣೆ ಸಂಬಂಧಿತ ಮೂರು ಪ್ರಕರಣಗಳು ಬೆಳಕಿಗೆ ಬಂದಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ.

ಸುಲ್ತಾನಪುರ ಮೂಲದ ಸದಾಶಿವ ಶಿವಬಸಪ್ಪ ಮಗದುಮ್ (ಮಗುವಿನ ಮಲತಂದೆ), ಭಡಗಾಂವ್​ ಮೂಲದ, ಸದ್ಯ ಸುಲ್ತಾನಪುರದಲ್ಲಿ ವಾಸವಿರುವ ಲಕ್ಷ್ಮಿ ಬಾಬು ಗೋಲಭಾವಿ, ಕೊಲ್ಲಾಪುರದ ನಾಗಲಾ ಪಾರ್ಕ್‌ನ ಸಂಗೀತಾ ವಿಷ್ಣು ಸಾವಂತ್, ಅಂಬೇಡ್ಕರ್ ನಗರದ ನಿವಾಸಿ ಮತ್ತು ಕಾರವಾರದ ಹಳಿಯಾಳ ತಾಲೂಕಿನ ಕೆಸ್ರೋಳಿಯ ಅನಸೂಯಾ ಗಿರಿಮಲ್ಲಪ್ಪ ದೊಡ್ಮನಿ ಬಂಧಿತ ಆರೋಪಿಗಳಾಗಿದ್ದಾರೆ.

ಶಿವಬಸಪ್ಪ ಮಗದುಮ್, ಕೊಲ್ಲಾಪುರ ಮತ್ತು ಕಾರವಾರದ ಕೆಲವು ಮಧ್ಯವರ್ತಿಗಳು ಸೇರಿ ಬಾಲಕನನ್ನು ಬೆಳಗಾವಿ ನಗರದ ದಿಲಶಾದ್ ಸಿಕಂದರ್ ತಹಸೀಲ್ದಾರ್ ಎಂಬ ಮಹಿಳೆಗೆ 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ದಿಲ್ಶಾದ್ ಅವರಿಗೆ ಗಂಡು ಮಗು ಬೇಕಾಗಿತ್ತು ಎನ್ನಲಾಗಿದೆ.

ನಾಲ್ಕು ತಿಂಗಳ ಹಿಂದೆ ಬಾಲಕನ ತಾಯಿ ಸಂಗೀತಾ ಗುಡಪ್ಪ ಕಮ್ಮಾರ್ ಅವರನ್ನು ಮಗದುಮ್ ವಿವಾಹವಾಗಿದ್ದರು. ಮಗದುಮ್ ಅವರಿಗೆ ಈ ಹಿಂದೆ ಒಂದು ಮದುವೆಯಾಗಿದ್ದು, ಮಕ್ಕಳನ್ನು ಹೊಂದಿದ್ದರು. ಅವರ ಮಕ್ಕಳು ಆಗಾಗ್ಗೆ ಜಗಳವಾಡುತ್ತಿದ್ದರು ಮತ್ತು ಇದರಿಂದ ಬೇಸತ್ತು ಮಗದುಮ್ ಹುಡುಗನನ್ನು ಮಾರಾಟ ಮಾಡಿದ್ದರು ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!