ಅಕ್ರಮವಾಗಿ ಬೆಂಗಳೂರಿನಲ್ಲಿ ನೆಲೆಸಿದ್ದ ಪಾಕ್ ಪ್ರಜೆ ಸೇರಿ ನಾಲ್ವರ ಬಂಧನ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ನಕಲಿ ಗುರುತಿನೊಂದಿಗೆ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಪ್ರಜೆ ಆತನ ಪತ್ನಿ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ವಿಚಾರಣೆಯ ಪ್ರಕಾರ, ಪಾಕ್ ಪ್ರಜೆ ಪತ್ನಿ ಬಾಂಗ್ಲಾದೇಶದವರಾಗಿದ್ದು ಢಾಕಾದಲ್ಲಿ ವಿವಾಹವಾಗಿದ್ದರು.

2014ರಲ್ಲಿ ದೆಹಲಿಗೆ ಬಂದಿದ್ದ ದಂಪತಿಗಳು ನಂತರ 2018ರಲ್ಲಿ ಬೆಂಗಳೂರಿಗೆ ಆಗಮಿಸಿದ್ದರು. ಬಂಧಿತ ಇನ್ನಿಬ್ಬರು ಆತನ ಸೋದರ ಅಳಿಯಂದಿರು ಎಂದು ತಿಳಿದುಬಂದಿದೆ.

ಬೆಂಗಳೂರಿನ ಹೊರವಲಯದ ಜಿಗಣಿಯಲ್ಲಿ ಬೆಂಗಳೂರು ಪೊಲೀಸರು ಭಾನುವಾರ ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದರು.

ಜಿಗಣಿ ಇನ್ಸ್‌ಪೆಕ್ಟರ್ ಈ ಬಗ್ಗೆ ತನಿಖೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಂದೇ ಕುಟುಂಬದ ನಾಲ್ವರು ಅಕ್ರಮ ದಾಖಲೆಗಳ ಸಹಾಯದಿಂದ ಇಲ್ಲಿ ವಾಸವಿದ್ದರು. ಇದೀಗ ಪ್ರಕರಣ ದಾಖಲಿಸಿಕೊಂಡು ಆ ನಾಲ್ವರನ್ನು ವಿಚಾರಣೆ ನಡೆಸಲಾಗುತ್ತಿದೆ. ಸಂಪೂರ್ಣ ವಿಚಾರಣೆ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಂಧಿತರು ಪಾಕಿಸ್ತಾನ ಪ್ರಜೆ ರಷೀದ್ ಸಿದ್ದಿಕಿ ಅಲಿಯಾಸ್​ ಶಂಕರ್ ಶರ್ಮಾ (48), ಆಯುಷಾ ಅನಿಫ್ ಅಲಿಯಾಸ್​ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ ಅಲಿಯಾಸ್​ ರಾಮ್ ಬಾಬಾ ಶರ್ಮಾ (73), ರುಬೀನಾ ಅಲಿಯಾಸ್​ ರಾಣಿ ಶರ್ಮಾ (61) ಎಂದು ತಿಳಿದುಬಂದಿದೆ.

 

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!