ಬೆಂಗಳೂರಿನಲ್ಲಿ ಕೇಂದ್ರದ ನಾಲ್ವರು ಜಿಎಸ್​ಟಿ ಅಧಿಕಾರಿಗಳ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರದ ನಾಲ್ವರು ಜಿಎಸ್​​ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಮೊಟ್ಟ ಮೊದಲ ಬಾರಿಗೆ ಬಂಧಿಸಿರುವಂತಹ ಘಟನೆ ನಡೆದಿದೆ.

ಜಿಎಸ್​​ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ​​ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳು.

ಕೇಸ್ ಮುಚ್ಚಿಹಾಕುವುದಾಗಿ ಜಿಎಸ್​​ಟಿ ಅಧಿಕಾರಿಗಳು ಹಣ ಪಡೆದು ಬಳಿಕ ಪರಾರಿಯಾಗಿದ್ದರು. ಈ ಬಗ್ಗೆ ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಪೊಲೀಸ್​ ಠಾಣೆಗೆ ಓರ್ವ ಉದ್ಯಮಿ ದೂರು ನೀಡಿದ್ದರು. ದೂರು ಆಧರಿಸಿ ಓರ್ವ ಮಹಿಳಾ ಅಧಿಕಾರಿ ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿದೆ.

ಬೆಂಗಳೂರು ನಗರ ಡಿಸಿಪಿ ದೇವರಾಜ್ ನೇತೃತ್ವದಲ್ಲಿ ಪಶ್ಚಿಮ ವಿಭಾಗ ಪೊಲೀಸರಿಂದ ಕಾರ್ಯಾಚರಣೆ ಮಾಡಿ ಬಂಧಿಸಲಾಗಿದೆ. ಪ್ರಕರಣವನ್ನು ನಗರ ಪೊಲೀಸ್​ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!