Wednesday, October 5, 2022

Latest Posts

ನಿಲ್ಲದ ಮಳೆಯ ಅಬ್ಬರ: ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ಕು ಹಸುಗಳ ದಾರುಣ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಕರಾವಳಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮಳೆಗೆ ಉರುಳಿಬಿದ್ದಿದ್ದ ವಿದ್ಯುತ್ ತಂತಿ ತಗುಲಿ ನಾಲ್ಕು ಹಸುಗಳು ಸಾವನ್ನಪ್ಪಿದ ದಾರುಣ ಘಟನೆ ಕುಂದಾಪುರದ ಆಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರ್ಕೂರಿನಲ್ಲಿ ನಡೆದಿದೆ.

ಮೇಯಲು ಹೋಗಿದ್ದ ಹಸುಗಳು ಕಡಿದುಬಿದ್ದಿದ್ದ ತಂತಿ ಸ್ಪರ್ಶಿಸಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಹಾಗೂ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!