ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, June 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಕೊರೋನಾ ಸೋಂಕು ನಿಯಂತ್ರಣಕ್ಕೆ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್‍ಡೌನ್!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….

ಹೊಸ ದಿಗಂತ ವರದಿ, ಹಾಸನ:

ಹಾಸನ ಜಿಲ್ಲೆಯಲ್ಲಿ ಕೊರೋನಾ ಸೋಂಕು ನಿಯಂತ್ರಣ ಮೀರಿ ಹೆಚ್ಚಾಗುತ್ತಿರುವ ಹಿನ್ನೆಲೆ ಕಠಿಣ ನಿರ್ಧಾರ ಅನಿವಾರ್ಯವಾಗಿದ್ದು, ವಾರದಲ್ಲಿ ನಾಲ್ಕು ದಿನ ಕಟ್ಟುನಿಟ್ಟಿನ ಸಂಪೂರ್ಣ ಲಾಕ್‍ಡೌನ್ ಘೋಷಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಿಗ್ಗೆ 6 ರಿಂದ 10ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಮಾಡಿಕೊಡಲಾಗುವುದು. ಆಸ್ಪತ್ರೆ, ಮೆಡಿಕಲ್ ಶಾಪ್, ಹಾಲಿನ ಬೂತ್, ಪೆಟ್ರೋಲ್ ಬಂಕ್‍ಗಳು ಎಂದಿನಂತೆ ಕಾರ್ಯನಿರ್ವಹಿಸುತ್ತವೆ. ಅನಗತ್ಯವಾಗಿ ಓಡಾಡುವವರು ಎಚ್ಚೆತ್ತುಕೊಳ್ಳದಿದ್ದರೆ ಕಾನೂನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ಮೇ 24ರ ವರೆಗೆ ಈ ನಿಯಮ ಜಾರಿಯಲ್ಲಿರಲಿದೆ. 15 ದಿನಗಳ ಮುಂಗಡ ಯೋಜನೆ ಅನುಸಾರದಡಿ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಕೊರೊನಾ ಹಳ್ಳಿಯಲ್ಲಿ ಹೆಚ್ಚಿರುವುದರಿಂದ ಹೋಂ ಐಸೋಲೆಷನ್‍ನಲ್ಲಿರುವವರನ್ನು ಕೋವಿಡ್ ಕೇರ್ ಸೆಂಟರ್‌ಗೆ ಕರೆತರಲಾಗುವುದು. 27 ಕೇಂದ್ರಗಳ ತೆರೆಯಲಾಗಿದ್ದು, ಪ್ರತಿ ತಾಲ್ಲೂಕಿನಿಂದ 100 ರೋಗಿಗಳನ್ನು ಅಲ್ಲಿಗೆ ದಾಖಲಿಸಲಾಗುವುದು. ಕೊರೊನಾ ಸೋಂಕಿತರಿಗೆ ಮಾತ್ರೆ, ಊಟ ಹಾಗೂ ವಸತಿಗೆ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss