ಸೋನು ಗೌಡಗೆ ನಾಲ್ಕು ದಿನ ಪೊಲೀಸ್ ಕಸ್ಟಡಿ: ಕೋರ್ಟ್ ಆದೇಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಗುವನ್ನು ಅಕ್ರಮವಾಗಿ ಮನೆಯಲ್ಲಿ ಇಟ್ಟುಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಬಿಗ್ ಬಾಸ್ ಮಾಜಿ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ (Police Custody) ಒಪ್ಪಿಸಿ ಬೆಂಗಳೂರಿನ ಸಿಜೆಎಂ ಕೋರ್ಟ್ ಆದೇಶ ನೀಡಿದೆ.

ಮಗು ಪೋಷಕರನ್ನು ರಾಯಚೂರಿಗೆ ಕರ್ಕೊಂಡು ಹೋಗಿ ಮಹಜರು ಮತ್ತು ಹೇಳಿಕೆ ಪಡೆಯಬೇಕಿದೆ. ಅಪಾರ್ಟ್ ಮೆಂಟ್ ನ ಅಕ್ಕಪಕ್ಕದ ಸ್ಥಳೀಯರ ಹೇಳಿಕೆ ಪಡೆಯಬೇಕಿದೆ. ಈ ಉದ್ದೇಶ ದಿಂದ ನಾಲ್ಕು ದಿನಗಳ ಕಾಲ ಕಸ್ಟಡಿಗೆ ಬ್ಯಾಡರಹಳ್ಳಿ ಪೊಲೀಸರು ಕೇಳಿದರು.
ಸದ್ಯ ಡೈರಿ ಸರ್ಕಲ್ ಬಳಿಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ಸೋನುವನ್ನು ಪೊಲೀಸರು ಕಳುಹಿಸಲಿದ್ದಾರೆ.

ಮಗುವನ್ನು ಅನಧಿಕೃತವಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಹಿನ್ನೆಲೆಯಲ್ಲಿ ಸೋನು ಅನ್ನು ಇಂದು ಬೆಳಗಿನ ಜಾವ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!