ಮುಂಗಾರು ಪ್ರವೇಶಕ್ಕೆ ನಾಲ್ಕೇ ದಿನ: ಭರ್ಜರಿ ಸ್ವಾಗತಕ್ಕೆ ವೇದಿಕೆ ಸಜ್ಜುಗೊಳಿಸುತ್ತಿದೆ ಕೇರಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಮೇ 31 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನೈಋತ್ಯ ಮುಂಗಾರು ಕೇರಳದ ಮೇಲೆ ರಾಜ್ಯ ಪ್ರವೇಶಿಸಲಿದ್ದು, ಈ ಬಾರಿ ಉತ್ತಮ ಮುಂಗಾರು ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಗಾರು ಮಳೆಯೇ ಕೃಷಿ ಚಟುವಟಿಕೆಗಳನ್ನು ನಿರ್ಧರಿಸುತ್ತಿದ್ದು, ಸಹಜವಾಗಿಯೇ ರೈತರು ಸಂತಸಗೊಂಡಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಾಗ, ಮುಂಗಾರು ಮುಂಚಿತವಾಗಿ ಬರುತ್ತದೆ. ನೈಋತ್ಯ ಮಾನ್ಸೂನ್ ಈಗ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹರಡಿದೆ. ನೈಋತ್ಯ ಮಾನ್ಸೂನ್ ಮೇ 31 ರಂದು ಕೇರಳ ಕರಾವಳಿಯನ್ನು ತಲುಪುವ ನಿರೀಕ್ಷೆಯಿದೆ, ಅಲ್ಲಿಂದ ಜೂನ್ 1 ಅಥವಾ 2 ರಂದು ಕರ್ನಾಟಕ ಕರಾವಳಿಯನ್ನು ಪ್ರವೇಶಿಸಬಹುದು. ಇದರ ಪರಿಣಾಮ ಕರಾವಳಿಯಿಂದ ದಕ್ಷಿಣ ಒಳಭಾಗ ಹಾಗೂ ಉತ್ತರ ಒಳಭಾಗಕ್ಕೆ ಕ್ರಮೇಣವಾಗಿ ಹರಡಲಿದೆ ಎಂದು ಹವಾಮಾನ ತಜ್ಞ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!