ಬಸ್-ಟ್ರಕ್ ನಡುವೆ ಭೀಕರ ಅಪಘಾತ: 4 ಮಂದಿ ಸಾವು, 15 ಜನರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಇಂದು ಬೆಳಗ್ಗೆ ಬಸ್ ಮತ್ತು ಟ್ರಕ್ ಡಿಕ್ಕಿಯಾಗಿ 4 ಜನರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಅಹಮದಾಬಾದ್‌ಗೆ ತೆರಳುತ್ತಿದ್ದ ಬಸ್‌, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ಶಾಜಾಪುರ ಬಳಿ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ತುರ್ತು ಚಿಕಿತ್ಸಾ ದಳದವರು ನೆರವು ನೀಡಿ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಉಜ್ಜಯಿನಿಯ ಸಮೀಪದ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಪಘಾತದ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!