Monday, December 11, 2023

Latest Posts

ಸಾಬೂನು ತಯಾರಿಕಾ ಘಟಕದಲ್ಲಿ ಸ್ಫೋಟ: ನಾಲ್ಕು ಮಂದಿ ಸಾವು, ನಾಲ್ವರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸಾಬೂನು ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಇಂದು ಮೀರತ್ (ಉತ್ತರ ಪ್ರದೇಶ)ನ ಲೋಹಿಯಾ ನಗರದಲ್ಲಿ ನಡೆದಿದೆ.

ಸ್ಫೋಟದಿಂದಾಗಿ ಗೋದಾಮು ಸಂಪೂರ್ಣ ನೆಲಕ್ಕುರುಳಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಗಾಯಾಳುಗಳನ್ನು ಮೀರತ್ ವೈದ್ಯಕೀಯ ಕಾಲೇಜಿಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಗೋದಾಮಿನ ಕುಸಿತ ಹಿನ್ನೆಲೆ ಇನ್ನೂ ಕೆಲವರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ. ಈ ಸ್ಫೋಟದಿಂದಾಗಿ ಸಮೀಪದ ಮನೆಗಳಿಗೂ ಹಾನಿಯಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದರು.

ಈ ದುರಂತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ತಿಳಿದುಬರಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!