ಕೇರಳದಲ್ಲಿ ಧಾರಾಕಾರ ಮಳೆಗೆ ನಾಲ್ವರು ಸಾವು: ರೆಡ್‌ ಅಲರ್ಟ್‌ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇರಳದ ಹಲವು ಭಾಗಗಳಲ್ಲಿ ಧಾರಾಕಾರ ಮಳೆ ಸುರಿದು ನಾಲ್ವರು ಮೃತಪಟ್ಟಿದ್ದಾರೆ.

ಭಾರೀ ಮಳೆಯಾಗುವ ಸಾಧ್ಯತೆಯಿರುವ ಕೇರಳದ 5 ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಇಂದು ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯಿಂದ ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಇತ್ತೀಚಿನ ವರದಿಗಳ ಪ್ರಕಾರ, ವಿವಿಧ ಮಳೆ ಸಂಬಂಧಿತ ಘಟನೆಗಳಲ್ಲಿ ಕೇರಳ ರಾಜ್ಯಾದ್ಯಂತ 4 ಸಾವುಗಳು ವರದಿಯಾಗಿವೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಆಲಪ್ಪುಳ, ಕೊಟ್ಟಾಯಂ ಮತ್ತು ಎರ್ನಾಕುಲಂಗೆ ಮೊದಲು ಆರೆಂಜ್ ಅಲರ್ಟ್‌ ಘೋಷಿಸಲಾಗಿತ್ತು. ಆದರೆ, ನಂತರ ಆರೆಂಜ್ ಅಲರ್ಟ್ ತೆಗೆಯಲಾಗಿತ್ತು. ಇದೀಗ ಈ ಭಾಗದಲ್ಲಿ ಅತ್ಯಂತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!